ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಾಲಾ ಸಮಯವನ್ನು ಬೆಳಗ್ಗೆ 10 ಗಂಟೆಯಿಂದ ಸಂಜೆ 4.30ರವರೆಗೆ ನಿಗದಿಗೊಳಿಸಿ ಎಂದು ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ ಮಾಡಲಾಗಿದೆ.
ಕುವೆಂಪು ರಂಗಮಂದಿರದಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರೊಂದಿಗೆ ನಡೆದ ಶಿಕ್ಷಣ ಸಂವಾದದಲ್ಲಿ ಮನವಿ ಮಾಡಿದ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಬಸಪ್ಪ, ಶಾಲಾ ಸಮಯವನ್ನು ಬೆಳಿಗ್ಗೆ 10ರಿಂದ ಸಂಜೆ 4.30ರವರೆಗೆ ನಿಗಧಿಗೊಳಿಸಿ ಆದೇಶ ಹೊರಡಿಸಬೇಕು. ಸದ್ಯ ಇರುವ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ನೇಮಕಾತಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post