ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಸುಮಾರು ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಮ್ಮ ತವರು ಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದರು.
ಮೂರು ದಿನಗಳ ಅಧಿಕೃತ ಕಾರ್ಯಕ್ರಮಗಳ ನಿಮಿತ್ತ ಇಂದು ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಶಿಕಾರಿಪುರಕ್ಕೆ ಬಂದಿಳಿದ ಮುಖ್ಯಮಂತ್ರಿಗಳನ್ನು ಸಂಸದ ಬಿ.ವೈ. ರಾಘವೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧಿಕಾರಿ ಶಿವಕುಮಾರ್, ಹಿರಿಯ ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಬರಮಾಡಿಕೊಂಡರು.
ಶಿಕಾರಿಪುರಕ್ಕೆ ಇಷ್ಟು ತಿಂಗಳ ನಂತರ ಬಂದೊಡನೆಯೇ ತಮ್ಮ ಆರಾಧ್ಯ ದೈವ ಹುಚ್ಚ ರಾಯಸ್ವಾಮಿ ದೇವಾಲಯ ಮತ್ತು ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.
ಈ ಹಿಂದೆ ಎರಡು ಬಾರಿ ನಿಗದಿಯಾಗಿದ್ದ ಸಿಎಂ ತವರು ಕ್ಷೇತ್ರ ಪ್ರವಾಸ ಕೋವಿಡ್19 ಕಾರಣದಿಂದ ರದ್ದಾಗಿತ್ತು. ಇಂದು ಆಗಮಿಸಿರುವ ಅವರು ಮೂರು ದಿನ ಶಿಕಾರಿಪುರದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news






Discussion about this post