ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಪುರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಕುರಿತಾಗಿ ಬಿಜೆಪಿ ಕಚೇರಿಯಲ್ಲಿ ಸಭೆ ಆರಂಭವಾಗಿದೆ.
ಪುರಸಭಾ ಅಧ್ಯಕ್ಷ ಉಪಧ್ಯಕ್ಷ ಚುನಾವಣೆ ಇಂದು ನಡೆಯಲಿದ್ದು, ಬಿಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಅಧ್ಯಕ್ಷ, ಉಪಧ್ಯಕ್ಷರು ಯಾರಾಗ್ತಾರೆ ಎಂಬುದು ಪಕ್ಷ ತೀರ್ಮಾನಿಸಲಿದೆ.
ಇಂದು ಪಟ್ಟಣ ಮಾಳೇರಕೇರಿ ಬಿಜೆಪಿ ಕಚೇರಿಯಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಚರ್ಚೆಸಿ ಅಧ್ಯಕ್ಷ ಹೆಸರು ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಗಳ ಘೋಷಣೆಯಾಗಲಿದೆ.
ನಂತರ ಪುರಸಭೆಗೆ ತೆರಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲಿದ್ದಾರೆ ಎಂದು ಮಾಹಿತಿ ತಿಳಿದಿದೆ.
ಮಧ್ಯಾಹ್ನ 1 ಗಂಟೆಯ ವೇಳೆಗೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹೆಸರುಗಳು ಘೋಷಣೆಯಾಗಲಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post