ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಶಿರಾ ಹಾಗೂ ಆರ್’ಆರ್’ ನಗರ ಉಪಚುನಾವಣೆಯಲ್ಲಿ ನಾವು ಗೆಲುವು ಸಾಧಿಸುವುದು ನೂರಕ್ಕೆ ನೂರರಷ್ಟು ನಿಶ್ಚಿತ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಚೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ. ಎಲ್ಲಾ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು, ವಿಜಯೀಂದ್ರ ಅವರ ಮುಂದಾಳತ್ವದಲ್ಲಿ ಎಲ್ಲಾ ಕೆಲಸಗಳು ನಡೆಯುತ್ತಿವೆ. ಎರಡು ಕ್ಷೇತ್ರದಲ್ಲಿಯೂ ಬಿಜೆಪಿ ಪರವಾದ ಒಲವು ಇದೆ. ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ 3 ದಿನದಿಂದ ಶಿರಾದಲ್ಲಿಯೇ ಠಿಕಾಣಿ ಹೂಡಿದ್ದಾರೆ. ಎರಡೂ ಕ್ಷೇತ್ರದಲ್ಲಿಯೂ ಗೆಲ್ಲುವ ವಿಶ್ವಾಸ ಇದೆ ಎಂದರು.
ಉತ್ತರ ಕರ್ನಾಟಕದಲ್ಲಿ ಪ್ರವಾಹ ವಿಚಾರದಲ್ಲಿ ಪ್ರಧಾನಿ ಅವರ ಜೊತೆ ಮಾತನಾಡಿದ್ದೇನೆ. ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡಿದ್ದೇನೆ. ಮನೆ ಕಳೆದುಕೊಂಡವರಿಗೆ ಮನೆ ನೀಡುತ್ತೇವೆ. ಪ್ರವಾಹ ಪರಿಹಾರಕ್ಕೆ ಕೇಂದ್ರದಿಂದ ಹೆಚ್ಚಿನ ಪರಿಹಾರ ಕೊಡುವ ನಿರೀಕ್ಷೆ ಇದೆ ಎಂದರು.
ಶಿವಮೊಗ್ಗ ಜಿಲ್ಲೆ ಮಾದರಿ ಜಿಲ್ಲೆಯಾಗಿದ್ದು, ಅದೇ ರೀತಿ ಶಿಕಾರಿಪುರ ಮಾದರಿ ತಾಲೂಕು ಆಗಿದೆ. ಜಿಲ್ಲೆ ಹಾಗೂ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ನಡೆಯುತ್ತಿದೆ. 3 ದಿನಗಳ ಕಾಲ ಕ್ಷೇತ್ರದಲ್ಲಿಯೇ ಇರುತ್ತೇನೆ. ಕ್ಷೇತ್ರದ ಪ್ರವಾಸ ಮಾಡುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post