ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಸಿಗಂಧೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸುವ ಕುರಿತಾಗಿ ಜಿಲ್ಲೆಯ ಸಚಿವರು, ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ನಂತರವಷ್ಟೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಗಂಧೂರು ದೇವಾಲಯದಲ್ಲಿ ಅರ್ಚಕರು ಹಾಗೂ ಟ್ರಸ್ಟಿಗಳ ನಡುವೆ ಗಲಾಟೆ ನಡೆದಿರುವುದು ಶೋಭೆ ತರುವ ವಿಚಾರವಲ್ಲ. ದೇವರ ಹೆಸರಿನಲ್ಲಿ, ದೇವಿಯ ಸನ್ನಿಧಾನದಲ್ಲೇ ಇಂತಹ ಘಟನೆ ಎಲ್ಲಿಯೂ ನಡೆಯಬಾರದು ಎಂದು.
ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡುವ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕರಾದ ಹಾಲಪ್ಪ, ಕುಮಾರ್ ಬಂಗಾರಪ್ಪ ಹಾಗೂ ಜಿಲ್ಲಾಧಿಕಾರಿಗಳ ಜೊತೆಯಲ್ಲಿ ಚರ್ಚೆ ನಡೆಸಿ ಆನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post