ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿರಾಳಕೊಪ್ಪ: ಜಿಲ್ಲೆಯಲ್ಲಿ ಕಮಲ ಪಕ್ಷದ ನಾಗಾಲೋಟ ಮುಂದುವರೆದಿದ್ದು, ಶಿಕಾರಿಪುರದ ಬೆನ್ನಲ್ಲಾ ಶಿರಾಳಕೊಪ್ಪದ ಪಟ್ಟಣ ಪಂಚಾಯ್ತಿಯಲ್ಲೂ ಸಹ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ.
ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಲು ಇಂದು ಮಧ್ಯಾಹ್ನ 12 ಗಂಟೆವರೆಗೂ ಸಮಯಾವಕಾಶವಿತ್ತು. ಬಿಜೆಪಿಯ ಮಂಜುಳ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಜೇಶ್ವರಿ ವಸಂತ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಆದರೆ, ಪ್ರತಿಪಕ್ಷಗಳಿಂದ ಯಾರೂ ಹಾಜರಾಗಿ ಉಮೇದುವಾರಿಕೆ ಸಲ್ಲಿಸಲಿಲ್ಲ. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯ್ತಿಯ ಅಧಿಕಾರಿ ಬಿಜೆಪಿ ಮುಡಿಗೇರಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post