ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣ ಪಂಚಾಯ್ತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದೇ ವೇಳೆಯಲ್ಲಿ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಮತ್ತು ಸೊರಬ ತಾಲೂಕು ಆನವಟ್ಟಿ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ.
ಈ ಭಾಗದ ಜನರ ಬೇಡಿಕೆ ಈಡೇರಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಸದ ಬಿ.ವೈ. ರಾಘವೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post