ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಆರಂಭಿಸಿದೆ.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ತೆಗೆದು ಹಾಕುವುದಕ್ಕೆ ಸಂಬಂಧಿಸಿದಂತೆ 2020ರ ನವೆಂಬರ್ 22 ರಿಂದ 2020ರ ಡಿಸೆಂಬರ್ 13 ರವರೆಗಿನ ಪ್ರತಿ ಭಾನುವಾರಗಳಂದು ತಮ್ಮ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ, ನಿಗಧಿತ ನಮೂನೆ ಅರ್ಜಿಗಳನ್ನು ಸಲ್ಲಿಸುವಂತೆ ಪಾಲಿಕೆ ಆಯುಕ್ತ ಚಿದಾನಂದ ಎಸ್ ವಟಾರೆ ತಿಳಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post