ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ಖುಲಾಸೆಗೊಂಡಿರುವ ಪ್ರಕರಣದ ಮರು ತನಿಖೆ ನೆಪದಲ್ಲಿ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಅವರನ್ನು ಬಂಧಿಸಿರುವ ಮಹಾರಾಷ್ಟ್ರ ಸರ್ಕಾರವನ್ನುವಜಾಗೊಳಿಸಬೇಕು ಎಂದು ತಾಲೂಕು ಬಿಜೆಪಿ ಯುವ ಮೋರ್ಚಾ ಆಗ್ರಹಿಸಿದೆ.

ಈ ಕುರಿತಂತೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ನಂತರ ಮಾತನಾಡಿದ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಜಿನಿ ನಾಯ್ಕ್, ಸರ್ಕಾರಗಳು ತಪ್ಪು ಮಾಡಿದಾಗ ಭಾರತ ಸಂವಿಧಾನದ ನಾಲ್ಕನೆಯ ಅಂಗವಾದ ಮಾಧ್ಯಮವು ಅದನ್ನು ಎತ್ತಿ ತೋರಿಸಿ, ಸರಿದಾರಿಯಲ್ಲಿ ನಡೆಯುವಂತೆ ಮಾಡುವ ಕರ್ತವ್ಯವನ್ನು ಹೊಂದಿದೆ. ಇಂತಹ ಪವಿತ್ರ ವೃತ್ತಿಯಲ್ಲಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸರ್ಕಾರ ಬಂಧಿಸಿರುವುದು ಖಂಡನೀಯ ಎಂದರು.
ಮಹಾರಾಷ್ಟ್ರ ಸರ್ಕಾರದ ಜಂಟಿ ಪಕ್ಷವಾಗಿರುವ ಕಾಂಗ್ರೆಸ್ ಅಣತಿಯಂತೆ ನಿರಾಧಾರವಾಗಿ ಪ್ರಕರಣದಲ್ಲಿ ಗೋಸ್ವಾಮಿ ಅವರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯೇ ಸರಿ. ಅಲ್ಲದೇ. ಮಹಾರಾಷ್ಟ್ರ ಸರ್ಕಾರ ರಚನೆಯೇ ಜನಾದೇಶಕ್ಕೆ ವಿರುದ್ಧವಾಗಿದ್ದು. ಬಹುಮತವಿಲ್ಲದೇ ಇದ್ದರೂ ಪಕ್ಷಗಳು ಸೇರಿಕೊಂಡು ಸರ್ಕಾರ ರಚಿಸಿ, ತಮ್ಮ ಮನಸೋಯಿಚ್ಚೆ ದುರಾಡಳಿತ ನಡೆಸುತ್ತಿರುವುದು ಖಂಡನೀಯ. ದ್ವೇಷದ ರಾಜಕಾರಣಕ್ಕಾಗಿ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿರುವ ಮಹಾರಾಷ್ಟ್ರ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ವಕೀಲ ಯೋಗೀಶ್, ಪ್ರಮುಖರಾದ ಹರೀಶ್, ಶಶಿ ದಸ್ತಗಿರಿ, ಪುನೀತ್, ನವೀನ್, ಇಂದೂಧರ್ ಸೇರಿದಂತೆ ಹಲವರು ಇದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















