ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸ್ಮಾರ್ಟ್ ಸಿಟಿ ಅಡಿಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ವೇಗವನ್ನು ಹೆಚ್ಚಿಸಿ, ಗುಣಮಟ್ಟ ಕಾಪಾಡಿಕೊಳ್ಳಿ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಗರಗಳ ಅಭಿವೃದ್ಧಿಗೆ ಸಾಕಷ್ಟು ನೆರವು ನೀಡಿದ್ದಾರೆ. ಪ್ರತಿ ಸ್ಮಾರ್ಟ್ ಸಿಟಿಗೂ 500 ಕೋಟಿ ರೂ. ನೆರವು ಸಿಕ್ಕಿದೆ. ಕೋವಿಡ್, ಅಧಿಕ ಮಳೆಯ ಕಾರಣ ಕಾಮಗಾರಿಗಳ ಅನುಷ್ಠಾನಕ್ಕೆ ಹಿನ್ನಡೆಯಾಗಿತ್ತು. ಎರಡು ತಿಂಗಳಿನಿಂದ ಮತ್ತೆ ವೇಗ ಪಡದಿವೆ. ಮುಂದಿನ ಏಪ್ರಿಲ್ ವೇಳೆಗೆ ಈಗ ಕೈಗೊಂಡಿರುವ ಎಲ್ಲ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.
ಕೆರೆಗಳ ಸಂರಕ್ಷಣೆ, ಅಭಿವೃದ್ಧಿಗೆ ಒತ್ತು ನೀಡಲಾಗುವುದು. ನಗರದ ಕಲ್ಮಶ ನೀರು ನದಿಗೆ ಬಿಡುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ನಗರವನ್ನು ಸುಂದರವಾಗಿಸಲು ಮತ್ತಷ್ಟು ಕ್ರಮ ಕೈಗೊಳ್ಳಲಾಗಿದೆ. ಆಸ್ಪತ್ರೆಗಳಿಗೆ ಪರಿಕರ ವಿತರಿಸಲಾಗಿದೆ. ಸ್ವಚ್ಛ ಭಾರತ ಯೋಜನೆಯ ನೆರವು ಪಡೆಯಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಎಸ್. ದತ್ತಾತ್ರಿ, ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post