ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕರ್ನಾಟಕ ಪವರ್ ಕಾರ್ಪೋರೇಷನ್, ಯುಪಿಸಿಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿರುವುದರಿಂದ ಕೆಲವು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಬೇಡಿಕೆಯಷ್ಟು ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಕೆಪಿಸಿಯಿಂದ ಸುಮಾರು 2964 ಕೆವಿ ಯುಪಿಸಿಲ್ನಿಂದ ಸುಮಾರು 100 ಕೆವಿಯಷ್ಟು ಮತ್ತು ಕೇಂದ್ರಿಯ ವಿದ್ಯುತ್ ಉತ್ಪಾದನಾ ಕೇಂದ್ರಗಳಿಂದ 407 ಕೆವಿ. ಹೀಗೆ ರಾಜ್ಯದ ವಿದ್ಯುತ್ ಜಾಲವು ಒಟ್ಟು 4261 ಕೆವಿನಷ್ಟು ಪ್ರಮಾಣದ ವಿದ್ಯುತ್ ಪ್ರಮಾಣದಲ್ಲಿ ಸುಮಾರು 200 ಕೆವಿ ನಷ್ಟು ಕೊರತೆಯಾಗುವ ಸಂಭವವಿದೆ ಎನ್ನಲಾಗಿದೆ.
ಆದುದರಿಂದ ಸ್ಟೇಟ್ ಲೋಡ್ ಡಿಸ್ಪ್ಯಾಚ್ ಸೆಂಟರ್ನ ಸೂಚನೆಯಂತೆ ಮೆಸ್ಕಾಂ ವ್ಯಾಪ್ತಿಯ ಮಂಗಳೂರು ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಗಳಲ್ಲಿ ವಿದ್ಯುತ್ ಜಾಲದ ಸುರಕ್ಷತೆಯ ದೃಷ್ಟಿಯಿಂದ ಅನಿಯಮಿತವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಕಂಡುಬರಬಹುದು ಎನ್ನಲಾಗಿದೆ.ನೀರಾವರಿ ಪಂಪ್ಸೆಟ್ಟುಗಳಿಗೆ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಮತ್ತು ಮಧ್ಯರಾತ್ರಿಯಿಂದ ಬೆಳ್ಳಿಗ್ಗೆ 4ರವರೆಗೆ ಮಾತ್ರ ವಿದ್ಯುತ್ ಪೂರೈಕೆ ಸಾಧ್ಯವಾಗಿದೆ. ಆದ್ದರಿಂದ ಮುಂದಿನ ವಾರದ ವೇಳೆಗೆ ವಿದ್ಯುತ್ ಉತ್ಪಾದನೆಯಲ್ಲಿ ಸುಧಾರಣೆ ನಿರೀಕ್ಷಿಸಲಾಗಿದ್ದು, ಅಲ್ಲಿಯವರೆಗೆ ಮೆಸ್ಕಾಂ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post