ದೇವಸ್ಥಾನದ ಬೀಗ ಮುರಿದು ಹುಂಡಿಯಲ್ಲಿದ್ದ ಹಣ ಒಡವೆ ಆಭರಣಗಳ ಕಳ್ಳತನ ಮಾಡಿದ್ದ ಕಳ್ಳರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಜೂ.16ರಂದು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಜಂಬರಗಟ್ಟೆ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಬಾಗಿಲಿಗೆ ಹಾಕಿದ್ದ ಬೀಗವನ್ನು ಯಾರೋ ಕಳ್ಳರು ಮುರಿದು ಹುಂಡಿಯಲ್ಲಿದ್ದ ಹಣ ಮತ್ತು ಬಂಗಾರ, ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು.
ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಆರೋಪಿಗಳಾದ ಬುಳ್ಳಾಪುರದ ರಘು (26) ತರಗನಹಳ್ಳಿಯ ಮಣಿಕಂಠ (26) ಇವರನ್ನು ದಸ್ತಗಿರಿ ಮಾಡಿ, ಚಿಕ್ಕಮಗಳೂರು ಸೇರಿದಂತೆ ಒಟ್ಟು 13 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ 32ಸಾವಿರ ರೂ.ಬೆಲೆ ಬಾಳುವ ಬೆಳ್ಳಿ ಮತ್ತು ಬಂಗಾರದ ಆಭರಣ, ದ್ವಿಚಕ್ರ ವಾಹನ ಹಾಗೂ 72 ಸಾವಿರ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















