ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ರೈಲ್ವೆ ಅಭಿವೃದ್ಧಿಯ ಪರ್ವವನ್ನು ಮುಂದುವರೆಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.
ಕೋಟೆ ಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಡಿಪೋ ಆರಂಭಿಸುವುದಾಗಿ ಸಂಸದರು ಈ ಹಿಂದೆ ಘೋಷಣೆ ಮಾಡಿದ್ದರು. ಇದು ಈಗ ಕಾರ್ಯರೂಪಕ್ಕೆ ಬರುತ್ತಿದ್ದು, ಇದಕ್ಕೆ ಟೆಂಡರ್ ಕರೆಯಲಾಗಿದೆ.
ಕೋಟೆ ಗಂಗೂರಿನಲ್ಲಿ ಕೋಚಿಂಗ್ ಡಿಪೋ ಆರಂಭಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದ್ದು, ರೈಲ್ವೆ ಟ್ರಾಕ್ ನಿರ್ಮಾಣ, ಸಣ್ಣ ಸೇತುವೆಗಳು ಸೇರಿದಂತೆ ಇದಕ್ಕೆ ಪೂರಕ ಕಾಮಗಾರಿಗಳನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಇದು ಜಿಲ್ಲೆಯ ರೈಲ್ವೆ ಇಲಾಖೆ ಅಭಿವೃದ್ಧಿಯಲ್ಲಿ ಮಹತ್ವದ ಹೆಜ್ಜೆಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post