ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಯುದ್ಧ ಉದಯಪುರದಲ್ಲಿ ಆರಂಭವಾಗಿದೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ನಾಮವಾಗುವ ಮೂಲಕ ಅಂತ್ಯಗೊಳ್ಳುತ್ತದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದರು.
Also Read: ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ನಿಯಮ ಶೀಘ್ರದಲ್ಲೇ ಜಾರಿ ಸಾಧ್ಯತೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದಯಪುರದಲ್ಲಿ ಇವರಿಬ್ಬರ ನಡುವಿನ ಯುದ್ಧ ಆರಂಭವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಚೇಲಾಗಳು ಇದನ್ನು ಆರಂಭಿಸಿದ್ದಾರೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ನಾಮವಾಗುವ ಮೂಲಕ ಅಂತ್ಯಗೊಳ್ಳುತ್ತದೆ ಎಂದು ಕಟಕಿಯಾಡಿದರು.
Also Read: ಪ್ರಿಯಾಂಕಾ ಪಾದಸ್ಪರ್ಶದಿಂದ ರಾಜ್ಯದಲ್ಲಿ ಕಾಂಗ್ರೆಸ್’ಗೆ ಪ್ರತಿಪಕ್ಷ ಸ್ಥಾನವೂ ಸಿಗದಂತಾಗಲಿ: ಈಶ್ವರಪ್ಪ ವ್ಯಂಗ್ಯ
ವಿಧಾನ ಪರಿಷತ್ ಹಾಗೂ ರಾಜ್ಯಸಭೆಗೆ ಪಕ್ಷದಿಂದ ಹೆಸರುಗಳನ್ನು ಅಂತಿಮಗೊಳಿಸಿ ಕೇಂದ್ರಕ್ಕೆ ಕಳುಹಿಸಲಾಗಿದ್ದು, ವರಿಷ್ಠರ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ಹಾಗೂ ರಾಜ್ಯಸಭೆಗೆ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಸಭೆಯಲ್ಲಿ ತೀರ್ಮಾನಿಸಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಇದರಲ್ಲಿ ವಿಜಯೇಂದ್ರ ಅವರ ಹೆಸರೂ ಸಹ ಇದೆ. ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ. ಅಲ್ಲಿಂದ ಬರುವ ಆದೇಶವನ್ನು ಪಾಲಿಸುತ್ತೇವೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post