ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯ್ತಿ ಚುನಾವಣೆಗೆ ಮತದಾನ ಮುಕ್ತಾಯವಾದ ಹಿನ್ನೆಲೆಯಲ್ಲಿ ಮತಯಂತ್ರಗಳನ್ನು ಮತ ಎಣಿಕೆ ಕೇಂದ್ರಗಳಲ್ಲಿ ಭದ್ರಪಡಿಸಲಾಗಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ.
ಶಿವಮೊಗ್ಗದಲ್ಲಿ ಎಚ್.ಎಸ್. ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜು ಹಾಗೂ ಭದ್ರಾವತಿಯ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜುಗಳನ್ನು ಸ್ಥಾಪಿಸಿರುವ ಸ್ಟ್ರಾಂಗ್ ರೂಂಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇನ್ನು, ತೀರ್ಥಹಳ್ಳಿಯಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂಗೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post