ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಅಯೋಧ್ಯೆಯಂತೆಯೇ ಮಥುರಾದಲ್ಲಿಯೂ ಸಹ ಪೂರ್ಣ ಪ್ರಮಾಣದಲ್ಲಿ ಶ್ರೀಕೃಷ್ಣ ದೇವಾಲಯ ನಿರ್ಮಾಣಕ್ಕೆ ಅವಕಾಶ ನೀಡಬೇಕು ಎಂದು ಕೆ.ಎಸ್. ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಮಥುರಾದಲ್ಲಿ ಕರಸೇವೆಗೆ ಅವಕಾಶ ನೀಡದೆ ಪೂರ್ಣ ಪ್ರಮಾಣದ ಕೃಷ್ಣ ದೇವಾಲಯ ನಿರ್ಮಾಣಕ್ಕೆ ಅವಕಾಶ ನೀಡಬೇಕು. ಇಲ್ಲದಿದ್ದಲ್ಲಿ ಮಥುರಾದಲ್ಲಿಯೂ ಕರಸೇವೆ ಮಾಡುವ ಅನಿವಾರ್ಯತೆ ಒದಗಿಬರುವ ಸಂಭವನೀಯತೆ ಇದೆ ಎಂದರು.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಹೋರಾಟದ ನೇತೃತ್ವ ವಹಿಸಿದ್ದ 32 ನಾಯಕರನ್ನು ಪ್ರಕರಣದಿಂದ ದೋಷಮುಕ್ತಗೊಳಿಸಿರುವುದು ಸಂತಸ ಮೂಡಿಸಿದೆ. ಇಂದಿನ ತೀರ್ಪು ಮಥುರಾದಲ್ಲಿ ಪೂರ್ಣ ಪ್ರಮಾಣದಲ್ಲಿ ಶ್ರೀಕೃಷ್ಣ ದೇವಾಲಯಕ್ಕೆ ಸ್ಪೂರ್ತಿ ನೀಡಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post