ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಮಾಚನೇಹಳ್ಳಿ 110/11 ಕೆ.ವಿ ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 29 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಕಿಯೋನಿಕ್ಸ್, ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್’ಆರ್’ಪಿ ಕಾಲೋನಿ, ನವುಲೆ, ಬಸವಾಪುರ, ಹಾತಿಕಟ್ಟೆ, ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂದು ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post