ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿ.ವಿ.ವ್ಯಾಪ್ತಿಯಲ್ಲಿ ಬರುವ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕೃಷಿನಗರ 01 02ನೇ ಮುಖ್ಯರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬಲ್ಸ್ ಅಪಾರ್ಟ್‌ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಉವಿ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















