ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತೀರ್ಥಹಳ್ಳಿ: ಬೆಜ್ಜವಳ್ಳಿ ಬಳಿಯಲ್ಲಿ ಕ್ಯಾಂಟರ್ ಪಲ್ಟಿಯಾಗಿ 10 ಹಸುಗಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದ್ದು, 6 ಹಸುಗಳು ಗಾಯಗೊಂಡಿವೆ.
ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕ್ಯಾಂಟರ್ ವಾಹನವೊಂದು ಬೆಜ್ಜವಳ್ಳಿಯ ಬಳಿಯಲ್ಲಿ ಪಲ್ಟಿಯಾಗಿದ್ದು, ದಟ್ಟ ಮಂಜು ಕವಿದಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.
ಅಪಘಾತ ನಡೆದ ಸ್ಥಳದಿಂದ ವಾಹನದಲ್ಲಿದ್ದ ಮೂವರು ಪರಾರಿಯಾಗಿದ್ದು, ಗಾಯಗೊಂಡಿರುವ ವಾಹನ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















