ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಸೇರಿದಂತೆ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕದ ಗೌರವ ಸಂದಿದೆ.
2019ನೆಯ ಸಾಲಿನಲ್ಲಿ ಉತ್ತಮ ಸೇವೆಗಾಗಿ ಮುಖ್ಯಮಂತ್ರಿಗಳ ಪದಕಗಳನ್ನು ಘೋಷಣೆ ಮಾಡಲಾಗಿದ್ದು, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಅವರಿಗೆ ಸಂದಿದೆ.
ಇನ್ನು, ಜಿಲ್ಲಾ ರಕ್ಷಣಾಧಿಕಾರಿ ಕಚೇರಿಯ ಕಂಪ್ಯೂಟರ್ ವಿಭಾಗದ ಟೆಕ್ನಿಕಲ್ ಸೆಲ್’ನ ಕಾನ್ಸ್’ಟೇಬಲ್ ವಿಜಯ್ ಹಾಗೂ ಆಗುಂಬೆ ಫಿಂಗರ್ ಪ್ರಿಂಟ್ ವಿಭಾಗದ ಎಎಸ್‘ಐ ಅತೀಕ್ ರೆಹಮಾನ್ ಅವರೂ ಸಹ ಮುಖ್ಯಮಂತ್ರಿಗಳ ಪದಕಕ್ಕೆ ಪಾತ್ರರಾಗಿದ್ದಾರೆ.

ಎಸ್’ಪಿ ಶಾಂತರಾಜು, ಎಎಸ್’ಐ ಅತೀಕ್ ರೆಹಮಾನ್ ಹಾಗೂ ಕಾನ್ಸ್’ಟೇಬಲ್ ವಿಜಯ್ ಅವರನ್ನು ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















