ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಗೌರಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮವಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ.
ಅಪಘಾತದ ರಭಸಕ್ಕೆ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬ ಸವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಸ್ಥಳದಲ್ಲಿ ಮೃತಪಟ್ಟ ವ್ಯಕ್ತಿಯ ವಿಳಾಸ ಪತ್ತೆಯಾಗಿಲ್ಲ. ಮೃತ ವ್ಯಕ್ತಿ ಶವವನ್ನು ನಗರದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಹೊಳೆಬೆನವಳ್ಳಿ ದೊಡ್ಡ ತಾಂಡ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟ ಶಿವನಾಯ್ಕ(50) ಎಂದು ಗುರುತಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news






Discussion about this post