ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ಯೋಜನೆಗಳಲ್ಲೂ ಕೈ ನಾಯಕರು ಬ್ರಹ್ಮಾಂಡ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
Also Read: ಸಚಿವರಾಗುತ್ತಾರಾ ಅಭಿವೃದ್ಧಿಯ ಹರಿಕಾರ, ಕ್ರಿಯಾಶೀಲ ಶಾಸಕ ಹಾಲಪ್ಪ
ಪಿಇಎಸ್ ಕಾಲೇಜಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿ ಎಲ್ಲ ಯೋಜನೆಗಳಲ್ಲೂ ಭಾರೀ ಭ್ರಷ್ಟಾಚಾರ ನಡೆದಿದೆ. ಹೀಗಿದ್ದರೂ ನಮ್ಮ ವಿರುದ್ಧ ಆರೋಪ ಮಾಡುವ ಜೊತೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸನ್ನು ಅವರು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

Also Read: ಪಂಡರಾಪುರದಲ್ಲಿ ರಾಜ್ಯದ ಯತ್ರಾರ್ಥಿಗಳಿಗಾಗಿ ನಿರ್ಮಾಣವಾಗಲಿದೆ ಅತಿಥಿ ಗೃಹ
ಸಿದ್ದಾಂತ ಹಾಗೂ ಬದ್ದತೆ ಹೊಂದಿರುವ ಪಕ್ಷವೆಂದರೆ ಅದು ಬಿಜೆಪಿ ಮಾತ್ರ. ಕಾಂಗ್ರೆಸ್ ಪಕ್ಷಕ್ಕೆ ಅದು ಎಲ್ಲಿದೆ. ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಎಷ್ಟು ಹೀನಾಯವಾಗಿ ಸೋತಿದೆ ಎಂಬುದು ತಿಳಿದಿದೆ. ಪಂಚರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಪಂಜಾಬ್’ನಲ್ಲೂ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಹೀಗಿದ್ದರೂ, ರಾಜ್ಯದಲ್ಲಿ ಅಧಿಕಾರ ಹಿಡಿಯುವ ಕನಸು ಕಾಣುತ್ತಿದ್ದಾರೆ ಎಂದು ಕಟಕಿಯಾಡಿದರು.
ನಮ್ಮ ಕಾರ್ಯಕರ್ತರು ಮುಂದಿನ ಒಂದು ವರ್ಷ ವಿಶ್ರಾಂತಿ ಪಡೆಯದೇ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸಬೇಕು. ಬಿಜೆಪಿ ಸರ್ಕಾರದ ಸಾಧನೆಯನ್ನು ಹಾಗೂ ಕಾಂಗ್ರೆಸ್’ನ ಡೋಂಗಿ ಸೆಕ್ಯುಲರಿಸಂನ್ನು ಜನರಿಗೆ ತಿಳಿಸಬೇಕು ಎಂದು ಕರೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















