ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಡಿ.19ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಸಂಸದ ಬಿ.ವೈ. ರಾಘವೇಂದ್ರ, ಅಂದು ನಡೆಯಲಿರುವ ವರ್ಚವಲ್ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಕೆಲವು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಚಿತ್ರದುರ್ಗ, ಶಿವಮೊಗ್ಗ ಸುಮಾರು 134 ಕಿಮೀ ರಸ್ತೆಯನ್ನು 529 ಕೋಟಿ ರೂ.ವೆಚ್ಚ ಮಾಡಿ ಚತುಷ್ಪಥ ರಸ್ತೆಯನ್ನಾಗಿ ಮಾಡಲಾಗುವುದು. ಹೊಳೆಹೊನ್ನೂರು ಬಳಿ ಇರುವ ತುಂಗಭದ್ರಾ ನದಿಗೆ ಸೇತುವೆ ಮತ್ತು 4 ರೈಲ್ವೆ ಮೇಲ್ಸೇತುವೆಗಳು, ಚೆನ್ನಗಿರಿ,ಹೊಸದುರ್ಗ ಮುಂತಾದ ಕಡೆಗಳಲ್ಲಿ ಬೈಪಾಸ್ ರಸ್ತೆಗಳನ್ನು ನಿರ್ಮಿಸಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post