ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕಳೆದ ತಿಂಗಳು ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಹಿಂದೂ ಯುವಕರ ಮನೆಗಳಿಗೆ ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಈ. ಕಾಂತೇಶ್ ಅವರು ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ.
ಹಳೇ ಶಿವಮೊಗ್ಗ ಭಾಗದ ಹಲವು ಹಿಂದೂಗಳ ಮನೆಗೆ ಭೇಟಿ ನೀಡಿದ ಅವರು, ನಗರದಲ್ಲಿ ನಡೆದ ಘಟನೆಗಳಿಂದ ಯಾವುದೇ ರೀತಿಯಲ್ಲೂ ಯಾರೂ ಸಹ ಭಯ ಪಡುವ ಅಗತ್ಯವಿಲ್ಲ. ನಿಮ್ಮ ರಕ್ಷಣೆ ಹಾಗೂ ಬೆಂಬಲಕ್ಕೆ ಸದಾ ನಾವಿದ್ದೇವೆ ಎಂದು ಧೈರ್ಯ ತುಂಬಿದರು.
ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆದಿದ್ದು, ತಪ್ಪಿತಸ್ಥರನ್ನು ಬಂಧಿಸಿ, ಅವರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಹಿಂದೂಗಳ ರಕ್ಷಣೆಗೆ ನಮ್ಮ ಸರ್ಕಾರ ಎಂದಿಗೂ ಕಂಕಣ ಬದ್ದವಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post