ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಈಗ ನಡೆಯುತ್ತಿರುವ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಅಭ್ಯರ್ಥಿಗಳ ಅರ್ಜಿಯಲ್ಲಿ ಬೆಂಬಲಿತ ಪಕ್ಷದ ಹೆಸರನ್ನು ಚುನಾವಣಾ ಆಯೋಗ ಕೇಳಿರುವುದು ಯಾವ ಕಾರಣಕ್ಕಾಗಿ ಎಂಬುದರ ಕುರಿತಾಗಿ ಸ್ಪಷ್ಟನೆ ನೀಡಬೇಕು ಎಂದು ರಾಜ್ಯ ಬಿಜೆಪಿ ಮಾಧ್ಯಮ ಪ್ರಕೋಷ್ಠ ಸಂಯೋಜಕ ಎಂ.ಬಿ. ಭಾನುಪ್ರಕಾಶ್ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಗ್ರಾಮ ಪಂಚಾಯ್ತಿ ಚುನಾವಣೆಯ ಪಕ್ಷಾತೀತವಾಗಿ ನಡೆಯಬೇಕು ಎನ್ನುವುದು ಕಾನೂನು ಹಾಗೂ ನಿಯಮವಿದೆ. ಆದರೆ, ಈ ಬಾರಿ ನಾಮಪತ್ರ ಸಲ್ಲಿಕೆ ಮಾಡುತ್ತಿರುವ ಅರ್ಜಿಯಲ್ಲಿ ಯಾವ ಪಕ್ಷದ ಬೆಂಬಲಿತ ಅಭ್ಯರ್ಥಿ ಎಂಬುದನ್ನು ನಮೂದಿಸಬೇಕು ಎಂದು ಕೇಳಿರುವುದರ ಹಿಂದಿನ ಉದ್ದೇಶವೇನು? ಆಯೋಗಕ್ಕೆ ಈ ಕುತೂಹಲ ಯಾಕೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post