ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಇಂದು ವಿಶ್ವ ಆನೆಗಳ ದಿನದ ಹಿನ್ನೆಲೆಯಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಗಜೇಂದ್ರನಿಗೆ ವಿಶೇಷ ಪೂಜೆ ಸಲ್ಲಿಸಿ, ಸರಳವಾಗಿ ಆಚರಿಸಲಾಯಿತು.
ಪ್ರತಿವರ್ಷ ಆನೆಗಳ ದಿನಾಚರಣೆ ಸಂದರ್ಭದಲ್ಲಿ ಆನೆಗಳ ಕ್ರೀಡಾಕೂಟ ಆಯೋಜಿಸಲಾಗುತ್ತಿತ್ತು. ಆದರೆ, ಕೋವಿಡ್ ಕಾರಣಕ್ಕಾಗಿ ಈ ಬಾರಿ ಆನೆಗಳ ಕ್ರೀಡಾಕೂಟವನ್ನು ಇಲಾಖೆ ರದ್ದುಗೊಳಿಸಿದೆ.

ಆದರೆ, ಆನೆ ದಿನವನ್ನು ಸರಳವಾಗಿಯಾದರೂ ಅರ್ಥಪೂರ್ಣವಾಗಿ ಆಚರಿಸಿದ ಇಲಾಖೆ ಆನೆಗಳಿಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ವಿಶೇಷ ಪೂಜೆ ಸಲ್ಲಿಸಿ, ಆಹಾರ ನೀಡಿ ಆಚರಿಸಿದರು.
ಸಿಸಿಎಫ್ ರವಿಶಂಕರ್, ಡಿಎಫ್‌ಓ ಐ.ಎಂ. ನಾಗರಾಜ್ ನೇತೃತ್ವದಲ್ಲಿ ಆನೆಗಳಿಗೆ ಪೂಜೆ ನಡೆಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















