ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶಕ್ಕೆ ಬ್ರಿಟೀಷರಿಂದ ಸ್ವಾತಂತ್ರ ತಂದುಕೊಡಲು ಲಕ್ಷಾಂತರ ಮಂದಿ ಮಾಡಿರುವ ತ್ಯಾಗ ಹಾಗೂ ಬಲಿದಾನವನ್ನು ಇಂದಿನ ಯುವಕರು ಅರಿಯಬೇಕು ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಎಂಎಸ್ ಡಾ.ಎಚ್.ಎಂ. ಶಿವಮೂರ್ತಿ ಹೇಳಿದರು.
ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ 75ನೆಯ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ ತಂದುಕೊಡಲು ದೆಲ್ಲಿಯಿಂದ ಕಟ್ಟಕಡೆಯ ಹಳ್ಳಿಯವರೆಗೂ ಲಕ್ಷಾಂತರ ಮಂದಿ ಹೋರಾಡಿದ್ದಾರೆ. ಅವರೆಲ್ಲರ ತ್ಯಾಗ ಹಾಗೂ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ ದೊರೆಯಿತು. ಈಗ ನಮ್ಮ ದೇಶಕ್ಕೆ ಸ್ವಾತಂತ್ರ ದೊರೆತು 75 ವರ್ಷಗಳಾಗಿದ್ದು, ಇಂದಿನ ಪೀಳಿಗೆ ಈ ಇತಿಹಾಸವನ್ನು ಅರಿಯಬೇಕು ಎಂದು ಕರೆ ನೀಡಿದರು.
ತಡಿಕೆಲ ಸುಬ್ಬಯ್ಯ ಟ್ರಸ್ಟ್ ಛೇರ್ಮನ್ ಟಿ. ಸುಬ್ಬರಾಮಯ್ಯ ಅವರು ಧ್ವಜಾರೋಹಣ ಮಾಡಿದರು. ಸುಬ್ಬಯ್ಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ದೇಶಭಕ್ತಿ ಕುರಿತಾಗಿನ ನೃತ್ಯ ಕಾರ್ಯಕ್ರಮ ನಡೆಯಿತು.
ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ, ಡಾ. ಅದಿತಿ ನಾಗೇಂದ್ರ, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ವನಮಾಲ ಸತೀಶ್, ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎಸ್. ಸುರೇಶ್, ದಂತ ವೈದ್ಯಕೀಯ ಕಾಲೇಜಿನ ಉಪಪ್ರಾಂಶುಪಾಲ ಡಾ.ಮಿಥುನ್, ವೈದ್ಯಕೀಯ ಹಾಗೂ ವೈದ್ಯಕಿಯೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post