ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಶಿವಮೊಗ್ಗ ಆರ್ಯವೈಶ್ಯ ಮಹಾಜನ ಸಮಿತಿ ಆತಿಥ್ಯದಲ್ಲಿ ಕರ್ನಾಟಕ ಆರ್ಯವೈಶ್ಯ ಮಹಾಸಭಾದ 11ನೇ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ತರಗತಿಗಳಲ್ಲಿ ಶೇ. 95ಕ್ಕೂ ಹೆಚ್ಚಿನ ಅಂಕ ಪಡೆದವರನ್ನು, ಪದವಿ ಮತ್ತು ಉನ್ನತ ವ್ಯಾಸಂಗದಲ್ಲಿ ಹೆಚ್ಚಿನ ಅಂಕ ಪಡೆದ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಅಭಿನಂದಿಸುವ ವಿಶೇಷ ಕಾರ್ಯಕ್ರಮವನ್ನು ಆರ್ಯವೈಶ್ಯರ ಗುರುಗಳಾದ ಶ್ರೀ ಸಚ್ಚಿದಾನಂದ ಸರಸ್ವತಿಯವರು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಯಾರಿಗೋ ಹೋಲಿಕೆ ಮಾಡಿಕೊಳ್ಳದೆ, ನಿಮ್ಮ ಸಾಧನೆಯನ್ನೇ ಹೋಲಿಸಿಕೊಂಡು ಇನ್ನೂ ಹೆಚ್ಚಿನ ಮುಂದಿನ ಸಾಧನೆಗೆ ಅಣಿಯಾಗಿ ಎಂದು ಪ್ರೇರೆಪಣೆ ನೀಡುವಂತಹ ಮಾತುಗಳನ್ನಾಡಿದರು.
ಗ್ರಾಮೀಣ ಮತ್ತು ಪಂಚಾಯತ್ ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಮಾತನಾಡಿ, ಆರ್ಯವೈಶ್ಯ ಜನಾಂಗದ ಕೊಡುಗೆಯನ್ನು ಮತ್ತು ಸರಿ ಸುಮಾರು 1300 ಮಕ್ಕಳು ಶೇಕಡ 95ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಪ್ರೋತ್ಸಾಹಿಸುವ ಈ ಕಾರ್ಯಕ್ರಮ ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜಕೀಯ ಮುತ್ಸದಿ ಡಿ.ಹೆಚ್. ಶಂಕರಮೂರ್ತಿ, ಕರ್ನಾಟಕ ಆರ್ಯವೈಶ್ಯ ಮಹಾಸಭಾದ ರಾಜ್ಯಾಧ್ಯಕ್ಷ ಆರ್. ಪಿ. ರವಿಶಂಕರ್ ಅಧ್ಯಕ್ಷತೆ ವಹಿಸಿದ್ದರು,. ಶಿವಮೊಗ್ಗ ಆತಿಥೇಯ ಸಂಘ ಆರ್ಯವೈಶ್ಯ ಮಹಾಜನ ಸಮಿತಿ ಅಧ್ಯಕ್ಷರು ಹಾಗೂ ನೂತನ ವಿಧಾನ ಪರಿಷತ್ ಸದಸ್ಯ ಡಿ ಎಸ್ ಅರುಣ್, ಹುಣಸೂರಿನ ಶಾಸಕ ಎಚ್. ಪಿ. ಮಂಜುನಾಥ್, ಶಾಸಕ ರುದ್ರೇಗೌಡ್ರು, ಕಾರ್ಯಕ್ರಮ ಛೇರ್ಮೆನ್ ಭೂಪಾಳಂ ಶಶಿಧರ್, ಮಹಾಸಭಾದ ಕಾರ್ಯದರ್ಶಿ ಎಸ್.ಕೆ. ಶೇಷಾಚಲ, ಆರ್.ಎಲ್ ಪ್ರಭಾಕರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post