No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯದಲ್ಲಿ ಯಾವುದೇ ಸರ್ಕಾರವಿದ್ದರೂ ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧ: ಸಂಸದ ರಾಘವೇಂದ್ರ

ವೀರಶೈವ ಲಿಂಗಾಯತ ಮಠಾಧೀಶರ ಸುವರ್ಣ ಪರಿಷತ್‍ನಿಂದ ಬಿವೈಆರ್ ಅವರಿಗೆ ಸಾರ್ಥಕ ಸುವರ್ಣ ಅಭಿನಂದನೆ

kalpa News by kalpa News
December 9, 2023
in ಶಿವಮೊಗ್ಗ
0
ರಾಜ್ಯದಲ್ಲಿ ಯಾವುದೇ ಸರ್ಕಾರವಿದ್ದರೂ ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದಲ್ಲಿ ಮೊಟ್ಟಮೊದಲ ಬಾರಿಗೆ ಜಾತ್ಯಾತೀತವಾಗಿ, ಧರ್ಮಾತೀತವಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದುಡಿದಂತಹ ಯುವ ನಾಯಕ, ಅಭಿವೃದ್ಧಿಯ ಹರಿಕಾರ, ಜನಪ್ರಿಯ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಜಿಲ್ಲೆಯ ಎಲ್ಲ ಮಠಾಧೀಶರ ಪರವಾಗಿ ಆಶೀರ್ವದಿಸಿ ಅಭಿನಂದಿಸಲಾಯಿತು.

50 ವಸಂತಗಳನ್ನು ಪೂರೈಸಿದ ಬಿ.ವೈ. ರಾಘವೇಂದ್ರ BYRaghavendra ಅವರಿಗೆ ಸಾರ್ಥಕ ಸುವರ್ಣ ಶಿರೋನಾಮೆಯಡಿ ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಶನ್ ಹಾಲ್‍ನಲ್ಲಿ ಶುಕ್ರವಾರ ಸಂಜೆ ಮಲೆನಾಡು ವೀರಶೈವ ಲಿಂಗಾಯತ ಮಠಾಧೀಶರ ಪರಿಷತ್ತು ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಅವರ ಧರ್ಮಪತ್ರಿ ತೇಜಸ್ವಿನಿ ರಾಘವೇಂದ್ರ ಅವರನ್ನು ಮಲೆನಾಡು ವೀರಶೈವ ಲಿಂಗಾಯತ ಮಠಾಧೀಶರ ಪರಿಷತ್ ಅಧ್ಯಕ್ಷರಾದ ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಗಳು ಅಭಿನಂದಿಸಿ, ಆಶೀರ್ವದಿಸಿದರು.
ನಂತರ ಆಶೀರ್ವಚನ ನೀಡಿದ ಶ್ರೀಗಳು, ಸಾಧನೆ ಎಂಬುದು ಯಾರ ಸ್ವತ್ತೂ ಅಲ್ಲ, ಅಲ್ಲದೇ ಸುಮ್ಮನೆ ಕೈ ಕಟ್ಟಿ ಕುಳಿತರೆ ಅದು ಒಲಿಯುವುದಿಲ್ಲ. ಸಾಧನೆಯಿಂದಾಗಿಯೇ ಜೀವನದ ಸಾರ್ಥಕತೆ ಉಳಿದುಕೊಳ್ಳುತ್ತದೆ. ಅದರಲ್ಲೂ ಸಂಸದ ಬಿ.ವೈ.ರಾಘವೇಂದ್ರ ಅವರು ಜನಪ್ರತಿನಿಧಿಯಾಗಿ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವ ಜನಮಾನಸದಲ್ಲಿ ಉಳಿಯುವಂತಹ ಅನೇಕ ಕೆಲಸಗಳನ್ನು ಮಾಡಿ ತೋರಿಸಿ ಮಾದರಿಯಾಗಿದ್ದಾರೆ ಎಂದು ಬಣ್ಣಿಸಿದರು.

Also read: ಯಶಸ್ಸಿನ ದಾರಿ ತಪ್ಪಿಸುವ ಆಕರ್ಷಣೆಗಳಿಂದ ದೂರವಿರಿ: ತಹಶೀಲ್ದಾರ ಡಾ. ನೂರುಲ್ ಹೂದಾ ಸಲಹೆ

ಸಾಮಾನ್ಯವಾಗಿ ಸ್ವಾಮೀಜಿಗಳಿಗೆ ಜನರು ಸನ್ಮಾನ ಮಾಡುತ್ತಾರೆ. ಆದರೆ, ಎಲ್ಲ ಮಠಾಧೀಶರೇ ಒಬ್ಬ ಜನಪ್ರತಿನಿಧಿಗೆ ಸನ್ಮಾನಿಸುವುದು ವಿಶೇಷ. ಹಾಗಾಗಿ ಇದು ಅರ್ಥಪೂರ್ಣ ಹಾಗೂ ಅಪರೂಪದ ಕಾರ್ಯಕ್ರಮ ಎಂದು ನುಡಿದ ಅವರು, ಲೋಕಸಭಾ ಸದಸ್ಯ ಎಂಬ ಕಾರಣಕ್ಕೆ ಸನ್ಮಾನ ಮಾಡಲಾಗಿದೆಯೇ ಹೊರತು ಮಠ, ಮನ್ಯಗಳಿಗೆ ಆರ್ಥಿಕ ನೆರವು ನೀಡಿದ್ದಾರೆಂಬ ಕಾರಣಕ್ಕಲ್ಲ ಎಂದು ಸ್ಪಷ್ಟಪಡಿಸಿದರು.
ಅಭಿನಂದನೆಯನ್ನು ಸ್ವೀಕರಿಸಿ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ವೀರಶೈವ ಸಮಾಜದ ವ್ಯಾಪ್ತಿ ಬಹಳ ದೊಡ್ಡದು. ಸಣ್ಣಪುಟ್ಟ ಎಲ್ಲ ಸಮಾಜಗಳನ್ನೂ ಒಂದಾಗಿ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಸಮಾಜದ ಮೇಲಿದೆ. ಈ ಸಾರ್ಥಕ ಸುವರ್ಣ ಸನ್ಮಾನವು ಕ್ಷೇತ್ರದ ಜನರಿಗೆ ಸಂದ ಗೌರವ. ರಾಜ್ಯದಲ್ಲಿ ಯಾವುದೇ ಸರ್ಕಾರವಿದ್ದರೂ ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧನಾಗಿದ್ದೇನೆ. ಯಾವುದೋ ಜನ್ಮದ ಪುಣ್ಯದ ಫಲ ತಂದೆಗೆ ಜಿಲ್ಲೆಯ ಜನರು ರಾಜಕೀಯ ಶಕ್ತಿ ತುಂಬಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಶಸರಸಿಗೆ ಗುರುಗಳ ಆಶೀರ್ವಾದ ಒಂದೆಡೆಯಾದರೆ, ಕುಟುಂಬ ಮತ್ತು ಮತದಾರರ ಸಹಕಾರ ದೊಡ್ಡದಾಗಿದೆ. ಎಲ್ಲರೂ ಜತೆಗೂಡಿದಾಗ ಮಾತ್ರ ಒಬ್ಬ ಜನಪ್ರತಿನಿಧಿ ಯಶಸ್ವಿಯಾಗಿ ಕೆಲಸ ಮಾಡಲು ಸಾಧ್ಯ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ನಿಟ್ಟೂರು ನಾರಾಯಣಗುರು ಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಅವರು, ಸಂಸದ ರಾಘವೇಂದ್ರ ಅವರು  ಶಿವಮೊಗ್ಗ ಜಿಲ್ಲೆಗೆ ಅಭಿವೃದ್ಧಿಯ ಧ್ರುವತಾರೆ ಮತ್ತು ಕಲ್ಪವೃಕ್ಷವಾಗಿದ್ದಾರಲ್ಲದೇ ಮಾದರಿ ಎನಿಸಿದ್ದಾರೆ ಎಂದರು.

ಬಸವಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಮಹಾ ಸ್ವಾಮಿಗಳು ಪ್ರಾಸ್ತಾವಿಕವಾಗಿ ಮಾತನಾಡಿ, ರಾಘವೇಂದ್ರ ಅವರು ಶಿವಮೊಗ್ಗದ ಸರ್ವತೋಮುಖ ಅಭಿವೃದ್ಧಿಗಾಗಿ ಮಾದರಿ ಕೆಲಸ ಮಾಡಿದ್ದಾರೆ. ಒಬ್ಬ ರಾಜಕಾರಣಿಗೆ ಜಿಲ್ಲೆಯ ಎಲ್ಲ ಸಮಾಜದ ಮಠಾಧೀಶರು ಮತ್ತು ಎಲ್ಲ ಸಮಾಜದ ಒಂದಾಗಿ ಅಭಿನಂದಿಸುತ್ತಿರುವುದು ವಿಶೇಷ ಎಂದರು.
ಶರಣ ಸಾಹಿತ್ಯ ಪರಿಷತ್‍ನ ರಾಷ್ಟ್ರೀಯ ಅಧ್ಯಕ್ಷ ಡಾ. ಸಿ.ಸೋಮಶೇಖರ್ ಅವರು ಧಾರ್ಮಿಕ ಮತ್ತು ರಾಜಕೀಯ ಮೌಲ್ಯಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ, ರಾಘವೇಂದ್ರ ಅವರು ರಾಜಕೀಯ ಮತ್ತು ಧಾರ್ಮಿಕ ಮೌಲ್ಯಗಳನ್ನು ಬಿತ್ತುತ್ತಾ ಬಂದಿದ್ದಾರೆ. ರೈಲ್ವೆ, ಹೈವೇ, ವಿಮಾನ ನಿಲ್ದಾಣ, ನೀರಾವರಿ ಯೋಜನೆಗಳ ಮೂಲಕ ಅಭಿವೃದ್ಧಿಯ ಹೊಸ ಭಾಷ್ಯಬರೆದಿದ್ದಾರೆ. ಸಂಸ್ಕೃತಿ, ಕಲೆ ಪ್ರಿಯರೂ ಆಗಿದ್ದಾರೆ. ರಾಜಕೀಯ, ಶಿಕ್ಷಣ ಹಾಗೂ ಸಾಮಾಜಿಕವಾಗಿ ಅವರ ಸೇವೆ ಅನನ್ಯವಾಗಿದೆ ಎಂದರು.

ನಿಟ್ಟೂರು ಶ್ರೀ ರೇಣುಕಾನಂದ ಮಹಾಸ್ವಾಮಿಗಳು, ಜಡೆ ಮಠದ ಶ್ರೀ ಮಹಾಂತ ದೇಶೀ ಕೇಂದ್ರ ಮಹಾಸ್ವಾಮೀಜಿ, ಶ್ರೀ ಘನ ಅಮರೇಶ್ವರ ಸ್ವಾಮಿಗಳು, ಬಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ, ಹಾರನಹಳ್ಳಿಯ ಶ್ರೀ ನೀಲಕಂಠ ಸ್ವಾಮಿಗಳು, ಕೋಣಂದೂರು ಮಠದ ಶ್ರೀ ಪಶುಪತಿ ಪಂಡಿತಾರಾದ್ಯ ಸ್ವಾಮೀಜಿ, ಗೊಗ್ಗೆಹಳ್ಳಿ ಶ್ರೀ ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಹಿರೇಮಾಗಡಿಯ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ, ಗುತ್ತಲದ ಶ್ರೀ ಪ್ರಭು ಸ್ವಾಮಿಗಳು, ತೊಗರ್ಸಿ ಪಂಚವಣ್ಣಿಗೆ ಮಠದ ಶ್ರೀ ಚನ್ನವೀರ ದೇಶೀಕೇಂದ್ರ ಸ್ವಾಮಿಗಳು, ಶ್ರೀ ಗುರು ಶಿವಾಚಾರ್ಯ ಹಾಲಸ್ವಾಮಿಗಳು, ಮೂಲೆಗದ್ದೆ ಸದಾನಂದ ಆಶ್ರಮದ ಶ್ರೀ ಅಭಿನವ ಚನ್ನಬಸವ ಸ್ವಾಮಿಗಳು ಸೇರಿದಂತೆ ಮೂವತ್ತಕ್ಕೂ ಹೆಚ್ಚು ಶ್ರೀಗಳು ಹಾಜರಿದ್ದರು. ಇದಕ್ಕೂ ಮೊದಲು ಖ್ಯಾತ ಹಿಂದೂಸ್ಥಾನಿ ಗಾಯಕ ಪಂಡಿತ್ ಅಂಬಯ್ಯ ನುಲಿ ಅವರಿಂದ ವಂಚನ ಸಂಗೀತ ನಡೆಯಿತು. ““ ಸಾವಿರಾರು ಜನ ಸೇರಿದ್ದ ಈ ಕಾರ್ಯಕ್ರಮದಲ್ಲಿ ಸ್ವಾಗತ, ನಿರೂಪಣೆ, ಪ್ರಾಸ್ತಾವಿಕ ಹಾಗೂ ವಂದನಾರ್ಪಣೆ  ಹೀಗೆ ಎಲ್ಲ ಹಂತಗಳನ್ನೂ ವಿವಿಧ ಮಠಾಧೀಶರೇ ಅತ್ಯಂತ ಅಚ್ಚುಕಟ್ಟಾಗಿ ನಡೆಸಿಕೊಟ್ಟಿದ್ದು ವಿಶೇಷವಾಗಿತ್ತು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BYRaghavendraKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯಶಸ್ಸಿನ ದಾರಿ ತಪ್ಪಿಸುವ ಆಕರ್ಷಣೆಗಳಿಂದ ದೂರವಿರಿ: ತಹಶೀಲ್ದಾರ ಡಾ. ನೂರುಲ್ ಹೂದಾ ಸಲಹೆ

Next Post

ಸದನದಲ್ಲಿ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸಲು ಬಿಜೆಪಿ ವಿಫಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್

kalpa News

kalpa News

Next Post
ಸದನದಲ್ಲಿ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸಲು ಬಿಜೆಪಿ ವಿಫಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್

ಸದನದಲ್ಲಿ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸಲು ಬಿಜೆಪಿ ವಿಫಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL