ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯಾರೂ ಹೆದರುವ ಅಗತ್ಯವಿಲ್ಲ ಮಳೆಯಿಂದ ಹಾನಿಗೊಳಗಾಗಿ ಸಂಕಷ್ಟದಲ್ಲಿರುವವರಿಗೆ ಪರಿಹಾರ ಒದಗಿಸಲಾಗುವುದು. ಅದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 500 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ಉಸ್ತುವಾರಿ ಸಚಿವ ನಾರಾಯಣ ಗೌಡ Minister Narayana Gowda ತಿಳಿಸಿದರು.
ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ರಾಘವೇಂದ್ರ ಅವರು ಜಿಲ್ಲೆಯಲ್ಲಿ ಹಾನಿಯಾಗಿರುವ ಬಹುತೇಕ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಪ್ರಸಕ್ತ ಸಾಲಿಗಿಂತ ಎರಡು ಪಟ್ಟು ಮಳೆಯಾಗಿದೆ. ಅತಿವೃಷ್ಟಿಗೊಳಗಾದ ಪ್ರದೇಶಗಳ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಒಟ್ಟು 291 ಮನೆಗಳಿಗೆ ಹಾನಿಯಾಗಿದ್ದು, ಪರಿಹಾರದ ಬಗ್ಗೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ನಗರ ಪ್ರದೇಶದಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳೊಂದಿಗೆ ಭೇಟಿ ನೀಡಿ, ಭದ್ರಾ ಜಲಾಶಯ ಭರ್ತಿಯಾಗಿದ್ದು, ಬಾಗಿನ ಸಮರ್ಪಣೆ ಮಾಡಲಾಗುವುದು. ನಂತರ ಸಾಗರಕ್ಕೆ ತೆರಳಲಿದ್ದೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post