No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ! ರೈಲ್ವೆ ಹಳಿ ದಾಟಿ ಅಂತ್ಯಸಂಸ್ಕಾರ

ಅಂತ್ಯಸಂಸ್ಕಾರಕ್ಕೂ ರೈಲ್ವೆ ಹಳಿ ದಾಟುವ ಅನಿವಾರ್ಯತೆ; ಅಂಡರ್‌ಪಾಸ್ ನಿರ್ಮಿಸುವಂತೆ ಸಂಸದರಿಗೆ ಸ್ಥಳೀಯರ ಮನವಿ

kalpa News by kalpa News
August 9, 2026
in ಶಿವಮೊಗ್ಗ
0
Shivamogga No Road To Cremation Ground Rail Track Crossing
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |  ವಿಶೇಷ ಲೇಖನ: ರಾಕೇಶ್ ಸೋಮಿನಕೊಪ್ಪ  |

ಶಿವಮೊಗ್ಗ (Shivamogga) ನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 1ರ ಸೋಮಿನಕೊಪ್ಪ ಭೋವಿ ಕಾಲೋನಿ ನಿವಾಸಿಗಳು ಮೂಲಭೂತ ಸೌಕರ್ಯದ ಕೊರತೆಯಿಂದ ಗಂಭೀರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸ್ಮಶಾನಕ್ಕೆ ಸಂಪರ್ಕಿಸುವ ರಸ್ತೆ ಇಲ್ಲದ ಕಾರಣ, ಮೃತದೇಹವನ್ನು ಕೊಂಡೊಯ್ಯುವ ಸಂದರ್ಭದಲ್ಲೇ ನಿವಾಸಿಗಳು ತೀವ್ರ ತೊಂದರೆ ಅನುಭವಿಸಬೇಕಾಗಿರುವುದು ಬೆಳಕಿಗೆ ಬಂದಿದೆ.

ಅಂತ್ಯಸಂಸ್ಕಾರಕ್ಕೂ ರೈಲ್ವೆ ಹಳಿ ದಾಟಬೇಕಾದ ಸ್ಥಿತಿ

ಸೋಮಿನಕೊಪ್ಪ ಭೋವಿ ಕಾಲೋನಿಯ ಸ್ಮಶಾನಕ್ಕೆ ತೆರಳಲು ಸೂಕ್ತ ರಸ್ತೆ ವ್ಯವಸ್ಥೆ ಇಲ್ಲದೆ, ಅಂತ್ಯಸಂಸ್ಕಾರ ಸಂದರ್ಭದಲ್ಲಿ ಮೃತದೇಹವನ್ನು ಹೊತ್ತುಕೊಂಡು ಹೋಗುವ ಜನರು ಕಲ್ಲು-ಮುಳ್ಳುಗಳ ನಡುವೆ ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

ಇದಲ್ಲದೆ, ಸ್ಮಶಾನಕ್ಕೆ ಹೋಗಲು ರೈಲ್ವೆ ಹಳಿ ದಾಟಲೇಬೇಕಾದ ಅನಿವಾರ್ಯತೆ ಇರುವುದರಿಂದ ಜನರ ಸುರಕ್ಷತೆಗೆ ದೊಡ್ಡ ಧಕ್ಕೆ ಉಂಟಾಗಿದೆ.

“ನಮ್ಮ ಜನರಿಗೆ ಸತ್ತ ಮೇಲೂ ನೆಮ್ಮದಿ ಇಲ್ಲ. ಅಂತ್ಯಸಂಸ್ಕಾರಕ್ಕೆ ಹೋಗಲು ರಸ್ತೆ ಇಲ್ಲ. ಸ್ಮಶಾನದಲ್ಲಿ ಕಲ್ಲು-ಮುಳ್ಳುಗಳು, ಗಿಡಗಂಟಿಗಳು ತುಂಬಿವೆ. ನಮ್ಮ ಸಂಕಷ್ಟವನ್ನು ಅರಿತು ಸಂಸದರು ತಕ್ಷಣ ಕ್ರಮ ಕೈಗೊಳ್ಳಬೇಕು.
-ಈರಪ್ಪ, ಸ್ಥಳೀಯ ಹಿರಿಯ ಮುಖಂಡ

ಮಳೆಗಾಲದಲ್ಲಿ ಮತ್ತಷ್ಟು ಕಷ್ಟ

ಮಳೆಗಾಲದ ಸಮಯದಲ್ಲಿ ಈ ಸಮಸ್ಯೆ ಇನ್ನಷ್ಟು ಗಂಭೀರವಾಗುತ್ತದೆ. ಗಿಡಗಂಟಿಗಳು, ಜುಳ್ಳುಗಳು ಹಾಗೂ ಕೆಸರು ತುಂಬಿರುವ ಮಾರ್ಗದಲ್ಲಿ ಮೃತದೇಹವನ್ನು ಸಾಗಿಸುವುದು ಅತ್ಯಂತ ಕಷ್ಟಕರವಾಗುತ್ತದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Kumadvathi College Shikariura

Shivamogga : ರೈಲ್ವೆ ಕೋಚಿಂಗ್ ಡಿಪೋ ಹಿನ್ನೆಲೆ – ಅಂಡರ್‌ಪಾಸ್ ಅಗತ್ಯ

ಸಮೀಪದ ಕೋಟೆಗಂಗೂರು ಪ್ರದೇಶದಲ್ಲಿ ರೈಲ್ವೆ ಕೋಚಿಂಗ್ ಡಿಪೋ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಭವಿಷ್ಯದಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಈಗಿರುವ ಸಮಸ್ಯೆ ಮುಂದಿನ ದಿನಗಳಲ್ಲಿ ಮತ್ತಷ್ಟು ಗಂಭೀರವಾಗುವ ಮುನ್ನ ಅಂಡರ್‌ಪಾಸ್ ನಿರ್ಮಿಸಬೇಕೆಂಬ ಬೇಡಿಕೆ ಸ್ಥಳೀಯರಿಂದ ಕೇಳಿಬಂದಿದೆ.

Also Read>> ಯಶ್ vs ಯಶ್ | ‘ಟಾಕ್ಸಿಕ್’ ಟ್ರೈಲರ್‌ ರಿಲೀಸ್ | ರೋಲ್‌ನ ಸಖತ್ ಝಲಕ್! ಫ್ಯಾನ್ಸ್ ಫುಲ್ ಖುಷ್!

ಅಂಡರ್‌ಪಾಸ್ ನಿರ್ಮಾಣದಿಂದ ಹಲವರಿಗೆ ಲಾಭ

ಈ ಭಾಗದಲ್ಲಿ ಅಂಡರ್‌ಪಾಸ್ ನಿರ್ಮಾಣವಾದರೆ ಸೋಮಿನಕೊಪ್ಪ ಭೋವಿ ಕಾಲೋನಿ ಮಾತ್ರವಲ್ಲದೆ ಕೋಟೆಗಂಗೂರು, ತ್ಯಾವರೆಕೊಪ್ಪ ಹಾಗೂ ಪಶುವೈದ್ಯಕೀಯ ಕಾಲೇಜಿಗೆ ತೆರಳುವ ಸಾರ್ವಜನಿಕರಿಗೂ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.PES Shivamoggaರೈಲ್ವೆ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಸಂಸದರಿಗೆ ಮನವಿ

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರ ಮುಂದಾಳತ್ವದಲ್ಲಿ ಜಿಲ್ಲೆಯಲ್ಲಿ ಹಲವೆಡೆ ರೈಲ್ವೆ ಅಂಡರ್‌ಪಾಸ್‌ಗಳು ನಿರ್ಮಾಣಗೊಂಡಿವೆ. ಇದೇ ಮಾದರಿಯಲ್ಲಿ ಸೋಮಿನಕೊಪ್ಪ ಭೋವಿ ಕಾಲೋನಿ ಪ್ರದೇಶದಲ್ಲಿಯೂ ಅಂಡರ್‌ಪಾಸ್ ನಿರ್ಮಿಸಿ, ಸ್ಮಶಾನಕ್ಕೆ ಸಂಪರ್ಕ ರಸ್ತೆ ಕಲ್ಪಿಸಬೇಕೆಂದು ನಿವಾಸಿಗಳು ಮನವಿ ಸಲ್ಲಿಸಿದ್ದಾರೆ.

“ಸ್ಮಶಾನಕ್ಕೆ ಸಂಪರ್ಕ ರಸ್ತೆ ನಿರ್ಮಾಣ ಹಲವು ವರ್ಷಗಳ ಬೇಡಿಕೆ. ಪ್ರತಿಸಾರಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು,”
-ಎಸ್.ಎಂ. ಸುರೇಶ

ತುರ್ತು ಕ್ರಮಕ್ಕೆ ಆಗ್ರಹ

ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ, ಅಂಡರ್‌ಪಾಸ್ ನಿರ್ಮಾಣ ಹಾಗೂ ಸ್ಮಶಾನಕ್ಕೆ ಸೂಕ್ತ ಸಂಪರ್ಕ ರಸ್ತೆ ಕಲ್ಪಿಸುವ ಮೂಲಕ ಹಲವು ವರ್ಷಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸೋಮಿನಕೊಪ್ಪ ಭೋವಿ ಕಾಲೋನಿ ನಿವಾಸಿಗಳು ಆಗ್ರಹಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalpa News Advertising DisclaimerKalahamsa Infotech private limited

Tags: Cremation GroundKannada News WebsiteLatest News KannadaLocal NewsMalnad NewsMP B Y RaghavendraRailway TracksShimogaShivamoggaShivamogga Newsಅಂತ್ಯಸಂಸ್ಕಾರಶಿವಮೊಗ್ಗಸೋಮಿನಕೊಪ್ಪ
Share228Tweet143Send
Aniruddha Vasishta S R

Aniruddha Vasishta S R

Editor-in-Chief

Previous Post

World Padel League Secures Strong Brand Backing Ahead of Its Biggest Season Yet

Next Post

ಭಂಡಾರಕೇರಿ ಮಠದಲ್ಲಿ ವೈಭವ | ಪ್ರಹ್ಲಾದಾಚಾರ್ಯರಿಗೆ ‘ಅಥರ್ವೋದ್ಘೋಷ ವಾಕ್ಪತಿ’ ಪ್ರಶಸ್ತಿ ಪ್ರದಾನ

kalpa News

kalpa News

Next Post
Udupi prahladacharya kanade atharvodghosha award udupi copy

ಭಂಡಾರಕೇರಿ ಮಠದಲ್ಲಿ ವೈಭವ | ಪ್ರಹ್ಲಾದಾಚಾರ್ಯರಿಗೆ ‘ಅಥರ್ವೋದ್ಘೋಷ ವಾಕ್ಪತಿ’ ಪ್ರಶಸ್ತಿ ಪ್ರದಾನ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL