ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಏ.12 ರಿಂದ 19 ರವರೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆಗೆ ನಾಮಪತ್ರಗಳನ್ನು ಉಮೇದುದಾರರು ಅಥವಾ ಸೂಚಕರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ #DC Grurudatta Hegde ತಿಳಿಸಿದರು.
ಶುಕ್ರವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಚುನಾವಣಾ ನಾಮಪತ್ರ ಸಲ್ಲಿಕೆ ಮತ್ತು ಚುನಾವಣಾ ಪ್ರಕ್ರಿಯೆ ಕುರಿತು ಮಾಹಿತಿ ನೀಡಲು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಭಾರತ ಚುನಾವಣಾ ಆಯೋಗವು ಮಾ.16 ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಧಿಸೂಚನೆ ಹೊರಡಿಸಿದ್ದು, ಅದರಂತೆ 14-ಶಿವಮೊಗ್ಗ ಲೋಕಸಭಾ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ಸಂಬಂಧಿಸಿದಂತೆ ಉಮೇದುವಾರರು ಅಥವಾ ಅವರ ಸೂಚಕರು ನಾಮಪತ್ರಗಳನ್ನು ಚುನಾವಣಾಧಿಕಾರಿಗಳಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಏ.12 ರಿಂದ ಏ.19 ರವರೆಗೆ ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 3.00 ರ ನಡುವೆ ಯಾವುದೇ ದಿನದಂದು (ಸರ್ಕಾರಿ ರಜಾದಿನದ ಹೊರತು) ಸಲ್ಲಿಸಬಹುದಾಗಿದೆ.

Also read: ಸಚಿವರ ಹೆಸರು ದುರ್ಬಳಕೆ | ಕಾಂಗ್ರೆಸ್ ಮುಖಂಡರ ದಬ್ಬಾಳಿಕೆ | ಸಿಡಿದೆದ್ದ ಸೊರಬ ದಲಿತ ಸಂಘರ್ಷ ಸಮಿತಿ
ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ತಿಳಿವಳಿಕೆ ಪತ್ರವನ್ನು ಉಮೇದುವಾರನು ಅಥವಾ ಅವರ ಯಾರೇ ಸೂಚಕರು ಅಥವಾ ಅದನ್ನು ಸಲ್ಲಿಸಲು ಉಮೇದುವಾರನಿಂದ ಲಿಖಿತದಲ್ಲಿ ಅಧಿಕೃತನಾದ ಆತನ ಚುನಾವಣಾ ಏಜೆಂಟನು ಮೇಲ್ಕಂಡ ಇಬ್ಬರಲ್ಲೊಬ್ಬ ಅಧಿಕಾರಿಗೆ ನಿಗದಿಪಡಿಸಿದ ಕಚೇರಿಯಲ್ಲಿ ಏ.22 ರಂದು ಮಧ್ಯಾಹ್ನ 03.00 ಗಂಟೆಗೆ ಮುಂಚೆ ಸಲ್ಲಿಸಬಹುದು.

ಅಭ್ಯರ್ಥಿಗಳು ನಾಮಪತ್ರವನ್ನು ನಮೂನೆ-2ಎ ನಲ್ಲಿ ಸಲ್ಲಿಸಬೇಕು.ನಮೂನೆ-26 ರಲ್ಲಿ ರೂ.100/- ಗಳ ಛಾಪಾ ಕಾಗದದಲ್ಲಿ ಅಭ್ಯರ್ಥಿಯ ಘೋಷಣಾ ಪತ್ರ, ಬೇಬಾಕಿಗೆ ಸಂಬಂಧಿಸಿದ ಇಲಾಖೆ ಹಾಗೂ ನೋಟರಿ ಪಬ್ಲಿಕ್ ರವರಿಂದ ದೃಢೀಕರಣ ಪತ್ರ ಸಲ್ಲಿಸಬೇಕು.

ಅಭ್ಯರ್ಥಿಗಳು ಹೊಸದಾಗಿ ಬ್ಯಾಂಕ್ ಖಾತೆ ತೆರೆದು ಅದರಲ್ಲೇ ತಮ್ಮ ಚುನಾವಣಾ ವೆಚ್ಚಗಳನ್ನು ನಿರ್ವಹಿಸಬೇಕಾಗುತ್ತದೆ. ಒಬ್ಬ ಅಭ್ಯರ್ಥಿ ಗರಿಷ್ಟ 4 ನಾಮಪತ್ರಗಳನ್ನು ಸಲ್ಲಿಸಬಹುದು ಹಾಗೂ ಎರಡಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತಿಲ್ಲ.
ರಾಷ್ಟ್ರೀಯ, ರಾಜ್ಯ ಮಾನ್ಯತೆ ಪಡೆದ ಪಕ್ಷದ ಅಭ್ಯರ್ಥಿಗೆ ಒಬ್ಬ ಸೂಚಕರು, ನೋಂದಾಯಿತ ಮಾನ್ಯತೆ ಪಡೆಯದ ಪಕ್ಷ, ಪಕ್ಷೇತರರಿಗೆ 10 ಸೂಚಕರು ಸಹಿ ಮಾಡಿರಬೇಕು. ನಾಮಪತ್ರ ಸಲ್ಲಿಸುವ ಅಭ್ಯರ್ಥಿಯ ಜೊತೆಗೆ 4 ಇತರ ಅಧಿಕೃತ ವ್ಯಕ್ತಿಗಳಿಗೆ ಮಾತ್ರ ನಾಮಪತ್ರ ಸ್ವೀಕೃತಿ ಕೇಂದ್ರದಿಂದ 100 ಮೀಟರ್ ಅಂತರದೊಳಗೆ ಪ್ರವೇಶಿಸಲು ಅವಕಾಶವಿರುತ್ತದೆ.

ಮಾನ್ಯ ಚುನಾವಣಾ ಆಯೋಗದ ಮಾರ್ಗದರ್ಶಗಳನ್ವಯ ನಾಮಪತ್ರ ಸ್ವೀಕೃತಿ ಕಾರ್ಯಕ್ಕೆ ಅವಶ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ ಅವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಅನುಸರಿಸಬೇಕಾದ ಸೂಚನೆಗಳ ಬಗ್ಗೆ ತಿಳಿಸಿದರು.
ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
	    	



 Loading ...
 Loading ... 
							



 
                
Discussion about this post