ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ನಿರ್ದೋಷಿಯಾಗಿ ಹೊರಬರುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ Former Minister Eshwarappa ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೋವಿ ಭವನದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರನ್ನು ಭೇಟಿಯಾದ ನಂತರ ಅವರು ಮಾತನಾಡಿದರು.
ಸಂತೋಷ್ ಪಾಟೀಲ್ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಇದರಲ್ಲಿ ನಾನು ಒಂದೇ ಒಂದು ಪರ್ಸೆಂಟ್ ಮಾಡಿದ್ದರೂ ನನಗೆ ಶಿಕ್ಷೆಯಾಗಲಿ ಎಂದರು.
ಪ್ರಕರಣದ ತನಿಖೆ ನಡೆಯುತ್ತಿದ್ದು, ಎಲ್ಲ ಆಯಾಮದಲ್ಲೂ ತನಿಖೆಯಾಗುತ್ತಿದೆ. ಇದರಲ್ಲಿ ನಾನು ನಿರ್ದೋಷಿಯಾಗಿ ಹೊರ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Also read: ಹೊಸನಗರ ತಾಲೂಕಿನಲ್ಲಿ ಖಾಸಗಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post