ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಾರ್ಚ್ 20 ರಂದು ನಡೆಯುವ ಕರ್ನಾಟಕ ಐಕ್ಯ ಹೋರಾಟ ಕೇವಲ ಮೂರು ಕೃಷಿ ಕಾಯ್ದೆಯ ವಿರುದ್ಧದ ಚಳುವಳಿಯಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ಹೋರಾಟ ನಡೆಯಲಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಗೌರವಾಧ್ಯಕ್ಷ ಹೆಚ್.ಆರ್ ಬಸವರಾಜಪ್ಪ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, 1970ರಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿತ್ತು. ಅದು ಘೋಷಣೆ ಆದಂತ ತುರ್ತು ಪರಿಸ್ಥಿತಿಯಾಗಿತ್ತು. ಆದರೆ ಇಂದು ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿ ಹೋರಾಟವನ್ನ ಬೆಂಬಲಿಸಿದವರನ್ನ ಜೈಲಿಗೆ ಹಾಕಲಾಗುತ್ತಿದೆ ಎಂದರು.
80ರ ದಶಕದ ವಾತಾವರಣ ಏನು ನಿರ್ಮಾಣವಾಗಿತ್ತು ಅದು ಮತ್ತೆ ಈಗ ನಿರ್ಮಾಣವಾಗಿದೆ. ಅಂದು ಕಾಂಗ್ರೆಸ್ ಹೊರತು ಪಡಿಸಿ ಎಲ್ಲಾ ಪಕ್ಷಗಳು ಹೋರಾಡಿದ್ದವು. ಆದರೆ ಇಂದು ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post