ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯಾವ ಜಿಲ್ಲೆಯ ಜವಾಬ್ಧಾರಿಯ ವಹಿಸಿದರೂ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಬಗ್ಗೆ ಬೇಸರವಿಲ್ಲ. ಒಂದು ಜಿಲ್ಲೆಯಲ್ಲಿ ಕೆಲಸ ಮಾಡಿದ್ದೇವೆ. ಈಗ ಇನ್ನೊಂದು ಜಿಲ್ಲೆಯಲ್ಲಿಯೂ ಕೆಲಸ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲಾ ಕಾರ್ಯಕರ್ತರು ಎಲ್ಲಿಯಾದ್ರೂ ಕೆಲಸ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಕುರಿತಾಗಿ ಪ್ರತಿಕ್ರಿಯೆ ನೀಡಿದರು.
ಸಂಪುಟ ವಿಸ್ತರಣೆ ಮಾಡುವುದು ಸಿಎಂ ಅವರ ವಿವೇಚನೆಗೆ ಬಿಟ್ಟ ವಿಚಾರ. ಅವರು ಏನು ಕ್ರಮ, ಯಾವ ನಿರ್ಧಾರ ಕೈಗೊಳ್ಳಬೇಕೆಂಬುದನ್ನು ತೀರ್ಮಾಸುತ್ತಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post