ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರ ಆಶ್ರಯ ಗುಂಪು ಮನೆ ಯೋಜನೆಯಡಿ ಸರ್ವೇ ನಂ.56 ಹೆಚ್ ಬ್ಲಾಕ್‍ನಲ್ಲಿ 221 ಮನೆಗಳನ್ನು ಫಲಾನುಭವಿಗಳಿಗೆ ಹಂಚಲಾಗಿದ್ದು, ನಿವೇಶನಗಳನ್ನು ಪಡೆದು ವಾಸವಿಲ್ಲದೇ ಇರುವ ನಿವೇಶನದಾರರ ಮನೆಗಳನ್ನು ರದ್ದುಪಡಿಸಲಾಗಿರುತ್ತದೆ.
ನಿವೇಶನ ಪಡೆದು ವಾಸವಿಲ್ಲದೇ ಖಾಲಿ ಇರುವುದರಿಂದ ನಿವೇಶನದಾರರು ಸರ್ಕಾರದ ಆದೇಶದ ಹಕ್ಕುಪತ್ರದ ಹಿಂದೆ ಇರುವ ಷರತ್ತನ್ನು ಉಲ್ಲಂಘಿಸಿದ್ದು ಹಾಗೂ ತಮಗೆ ಮಂಜೂರಾಗಿರುವ ನಿವೇಶನಗಳಲ್ಲಿ ವಾಸವಿಲ್ಲದೇ ಖಾಲಿ ಇರುವುದರಿಂದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡಿಲ್ಲದಿರುವುದು ಕಂಡುಬಂದಿರುತ್ತದೆ. ಆದ್ದರಿಂದ ನಿವೇಶನದಾರರಿಗೆ ಮನೆಯ ಅವಶ್ಯಕತೆ ಇಲ್ಲವೆಂದು ಪರಿಗಣಿಸಿ, 6 ತಿಂಗಳ ಮುಂಚಿತವಾಗಿ (ದಿ: 20-04-2022) ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ, ಆಕ್ಷೇಪಣೆಗೆ ಬಂದ ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದ್ದು, ಉಳಿದ ಮನೆಗಳನ್ನು ರದ್ದುಪಡಿಸಲಾಗಿರುತ್ತದೆ ಎಂದು ಮಹಾನಗರಪಾಲಿಕೆ ಸಮುದಾಯ ಸಂಘಟನಾಧಿಕಾರಿಗಳು ತಿಳಿಸಿದ್ದಾರೆ.
Also read: ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಹೋರಾಟ ಅವಿಸ್ಮರಣೀಯ: ಶಾಸಕ ಡಿ.ಎಸ್. ಅರುಣ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post