ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯ #Lok Sabha Election ಎರಡನೇ ಹಂತದ ಮತದಾನದ ದಿನವಾದ ಮೇ 7ರಂದು ಎಲ್ಲ ರೀತಿಯ ಸಂಸ್ಥೆ ಹಾಗೂ ಕಾರ್ಖಾನೆಗಳು ತಮ್ಮ ಸಿಬ್ಬಂದಿಗಳಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಮೇ 07 ಮತದಾನದ ದಿನವಾಗಿದ್ದು, ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.

Also read: ಶಿವಮೊಗ್ಗ | ಭದ್ರಾವತಿಯ 5 ವರ್ಷದ ವಿದ್ಯಾರ್ಥಿನಿ ನಿರ್ಮಿಸಿದ ನೂತನ ದಾಖಲೆ ನೋಡಿ
ಒಂದು ವೇಳೆ ಯಾವುದೇ ಸಂಸ್ಥೆಗಳು ವೇತನ ಸಹಿತ ರಜೆ ನೀಡದೇ ಆಯೋಗದ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post