ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲಿಂಗನಮಕ್ಕಿ ಜಲಾಶಯ #Linganamakki dam ನೀರಿನ ಮಟ್ಟ 1801 ಅಡಿ ತಲುಪಿದ್ದು ಶೇ.65 ರಷ್ಟು ನೀರು ಸಂಗ್ರಹವಾಗಿದ್ದು 60 ಸಾವಿರ ಕ್ಯೂಸೆಕ್ಸ್ ಗಿಂತಲೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಇದೇ ರೀತಿ ಮುಂದುವರೆದಲ್ಲಿ ಶೀಘ್ರದಲ್ಲಿ ಜಲಾಶಯ ತುಂಬುವ ಸಾಧ್ಯತೆ ಇದೆ.
ಅಣೆಕಟ್ಟು ಸುರಕ್ಷತೆ ದೃಷ್ಟಿಯಿಂದ ಯಾವುದೇ ಸಮಯದಲ್ಲೂ ಹೆಚ್ಚುವರಿ ನೀರನ್ನು ಜಲಾಶಯದಿಂದ ಹೊರಬಿಡಲಾಗುವುದು ಎಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಗಲ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು (ಕಾಮಗಾರಿ) ಮೊದಲ ಮುನ್ನೆಚ್ಚರಿಕೆಯ ಸೂಚನೆ ನೀಡಿದ್ದಾರೆ.
Also read: ಹಗರಣಗಳ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಯಾಗಲಿ: ಡಿಸಿಎಂ ಈಶ್ವರಪ್ಪ ಆಗ್ರಹ
ಜಲಾಶಯದ ಕೆಳಭಾಗದ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಕ್ಕೆ ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post