ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜೂನ್ 14 ರ ಸೋಮವಾರ ಬೆಳಿಗ್ಗೆ 11 ಗಂಟೆಯಿಂದ ಸಂಜೆ 3 ಗಂಟೆವರೆಗೆ ಶಿವಮೊಗ್ಗ ತಾಲ್ಲೂಕು ಗಾಜನೂರು ಡ್ಯಾಂ ಕುಡಿಯುವ ನೀರಿನ ಸ್ಥಾವರದ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಗಾಜನೂರು 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಎಫ್-2, ಎಫ್-3, ಎಫ್-4 ಮತ್ತು ಎಫ್-5 ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಸಿದ್ದರಹಳ್ಳಿ, ಮಂಡೇನಕೊಪ್ಪ, ಶ್ರೀಕಂಠಪುರ ಹಾಗೂ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















