ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜುಲೈ 16 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜಿಎಫ್-2ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕುವೆಂಪು ರಸ್ತೆ, ದುರ್ಗಿಗುಡಿ, ದುರ್ಗಿಗುಡಿ ಮುಖ್ಯರಸ್ತೆ, ಜ್ಯುವೆಲ್‌ರಾಕ್ ರಸ್ತೆ, ಮಿಷನ್ ಕಾಂಪೌಂಡ್, ಗೋಪಿ ಸರ್ಕಲ್, ಸವಾರ್‍ಲೈನ್ ರಸ್ತೆ, ಜೆಪಿಎನ್ ರಸ್ತೆ, ಎಲ್‌ಐಸಿ ಬಿಲ್ಡಿಂಗ್, ಆಭರಣ, ಸಿಮ್ಸ್ ಮೆಡಿಕಲ್ ಕಾಲೇಜ್ ಮತ್ತು ಹಾಸ್ಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಜುಲೈ 17ರಂದು ವಿದ್ಯುತ್ ವ್ಯತ್ಯಯ:
ಮೆಸ್ಕಾಂ ವ್ಯವಸ್ಥೆ ಸುಧಾರಣಾ ಕಾಮಗಾರಿ ಕೆಲಸ ಇರುವುದರಿಂದ 11 ಕೆ ವಿ ಮಾರ್ಗ ಮುಕ್ತತೆ ನೀಡಲಾಗುತ್ತಿದ್ದು, ಶಾಂತಿನಗರ, ರಾಗಿಗುಡ್ಡ, ಬಲಭಾಗ ಮತ್ತು ಎಡಭಾಗದ 4 ರಿಂದ 8ನೇ ಕ್ರಾಸ್, ಸೇವಾಲಾಲ್ ನಗರ, ತಾವರೆಚಟ್ನಹಳ್ಳಿ, ವಡ್ಡರಹಟ್ಟಿ, ವಿಜಯಲಕ್ಷ್ಮಿ ರೈಸ್ ಮಿಲ್, ದೇವಂಗಿ ತೋಟ, ತಾವರೆಚಟ್ನಹಳ್ಳಿ ಯುಜಿಡಿ ಪ್ಲಾಂಟ್, ಗುಂಡಪ್ಪ ಶೆಡ್ ಯುಜಿಡಿ ಪ್ಲಾಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 17ರ ಶನಿವಾರ ದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮಂವಿಸಕಂನ ಕಾರ್ಯ ಮತ್ತು ಪಾಲನಾ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post