ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜೂನ್ 27 ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್-4 ಫೀಡರ್‍ನಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಸಾಗರ ಮುಖ್ಯರಸ್ತೆ, ಭಾರ್ಗವಿ ಪೆಟ್ರೋಲ್ ಬಂಕ್, ಆಲ್ಕೊಳ ಸರ್ಕಲ್, ಎಸ್.ಪಿ.ಕಚೇರಿ, ಪಂಪನಗರ, ಅಶೋಕನಗರ, ಎ.ಆರ್.ಬಿ.ಕಾಲೋನಿ, ಡಿ.ಎ.ಆರ್ ಮೈದಾನ, ಪೊಲೀಸ್ ಠಾಣೆ, ಸಕ್ರ್ಯೂಟ್ ಹೌಸ್, ಆಯನೂರು ಗೇಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉ.ವಿ 3 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















