ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ತಾಲೂಕಿನ ಹೊಳಲೂರು ಗ್ರಾಮದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕೇಬಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಮಾರ್ಚ್ 14ರ ಭಾನುವಾರದಂದು ವಿದ್ಯುತ್ ವ್ಯತ್ಯವಾಗಲಿದೆ.
ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಗಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋವಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೋಮ್ಮನಾಳ್, ಬಿಕ್ಳೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಅಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯಗೊಳ್ಳಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post