ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ನಗರ ಉಪ ವಿಭಾಗ-2, ಘಟಕ -6ರ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣ ಕಾಮಗಾರಿ ಕೈಗೊಂಡಿರುವುರಿಂದ ಮಾರ್ಚ್ 17ರ ನಾಳೆ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕೋಟೆ ರಸ್ತೆ, ಅಪ್ಪಾಜಿ ರಾವ್ ಕಾಂಪೌಂಡ್, ಓ.ಬಿ.ಎಲ್ ರಸ್ತೆ, ಪೆನ್ಷನ್ ಮೊಹಲ್ಲಾ, ಬಿ.ಹೆಚ್ ರಸ್ತೆ, ಸೈನ್ಸ್ ಫೀಲ್ಡ್ ರಸ್ತೆ, ರಾಜೇಂದ್ರ ನಗರ, ರವೀಂದ್ರ ನಗರ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂನ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















