ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯ ಸರ್ಕಾರವು 14 ದಿನಗಳ ಲಾಕ್‌ಡೌನ್ ಘೋಷಿಸಿರುವುದರಿಂದ ಏ.28ರಿಂದ ಮೇ.10ರವರೆಗೆ ಶಿವಮೊಗ್ಗ ವಿಭಾಗದ ಎಲ್ಲಾ ಅಂಚೆ ಕಚೇರಿಗಳು ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಸೇವೆಯನ್ನು ಒದಗಿಸಲಾಗುವುದು.

ಸಾರ್ವಜನಿಕರು ರಿಜಿಸ್ಟರ್ ಪೋಸ್ಟ್ ಮತ್ತು ಸ್ಪೀಡ್ ಪೋಸ್ಟ್‌ಗಳನ್ನು ಬುಕಿಂಗ್ ಮಾಡುವಾಗ ವಿಳಾಸದಾರರ ಮೊಬೈಲ್ ಸಂಖ್ಯೆನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ತಮಗೆ ಬಂದಿರುವ ಪತ್ರಗಳ ಖಾತರಿಯನ್ನು ಸಂಬಂಧಪಟ್ಟ ಅಂಚೆ ಕಚೇರಿಯಲ್ಲಿ ದೂರವಾಣಿ ಮೂಲಕ ಸಂಪರ್ಕಿಸಿ, ಖಚಿತಪಡಿಸಿಕೊಂಡು ನಂತರ ಭೇಟಿ ನೀಡುವಂತೆ ಅಂಚೆ ಅಧೀಕ್ಷಕ ಜಿ.ಹರೀಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















