ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲ್ಲೂಕಿನ ಆಯನೂರು ಗ್ರಾಮದಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಟ್ಯಾಪಿಂಗ್ ಗೋಪುರದ ಅಳವಡಿಕೆ ಕಾರ್ಯ ಇರುವುದರಿಂದ 110/11 ಕೆವಿ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಆ 11 ಮತ್ತು 12 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೊಸೂರು, ಹೊರಬೈಲು ಸುತ್ತಮುತ್ತ ಗ್ರಾಮಗಳು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಸುತ್ತುಕೋಟೆ ಸುತ್ತಮುತ್ತ ಗ್ರಾಮಗಳು ಹಾಗೂ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರೆ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Also read: ಚೆಸ್ ಪಂದ್ಯಾವಳಿ: ಕ್ರೈಸ್ಟ್ಕಿಂಗ್ ಶಾಲೆಯ ವರುಣ್ ಕಾಮತ್ ರಾಜ್ಯಮಟ್ಟಕ್ಕೆ ಆಯ್ಕೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















