ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ನ.9ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಶಿವಮೊಗ್ಗ ತಾಲೂಕು ಗಾಜನೂರು ವಿದ್ಯುತ್ ವಿತರಣಾ ಕೇಂದ್ರದ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ವಿದ್ಯುತ್ ಸರಬರಾಜು ಪಡೆಯುವ ಗಾಜನೂರು ಕ್ಯಾಂಪ್ ಮತ್ತು ಡ್ಯಾಂ ನವೋದಯ ಶಾಲೆ, ಹಾಲಲಕ್ಕವಳ್ಳಿ, ಕಡೇಕಲ್ ಯರಗನಾಳ್, ಕುಸ್ಕೂರು, ಸಿದ್ಧರಹಳ್ಳಿ, ಶ್ರೀಕಂಠಪುರ, ಹೊಸಕೊಪ್ಪ, ವೀರಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.


ವಿದ್ಯುತ್ ವ್ಯತ್ಯಯ:
ನವೆಂಬರ್ 9ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ 110/11 ಕೆವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಆಗಿ ಪರಿವರ್ತಿಸುವ ಸ್ಪನ್ ಪೋಲ್ ಅಳವಡಿಕೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಗಾರ್ಡನ್ ಏರಿಯಾ 1 ರಿಂದ 3ನೇ ಅಡ್ಡರಸ್ತೆ, ಸವರ್‌ಲೇನ್ ರಸ್ತೆ, ಎಲ್‌ಎಲ್‌ಆರ್ ರಸ್ತೆ, ಗೋಪಿವೃತ್ತ, ಜೆಪಿಎನ್ ರಸ್ತೆ, ದುರ್ಗಿಗುಡಿ, ಕಾಮಾಕ್ಷಿ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















