ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಂಗಳೂರು ವಿದ್ಯುಚ್ಫಕ್ತಿ ಸರಬರಾಜು ಕಂಪನಿಯು ಹೊಳೆಹೊನ್ನೂರು 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.30ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ಪ್ರದೇಶದ ವ್ಯಾಪ್ತಿಗೊಳಪಡುವ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post