ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಕುಂಸಿ, ಆಯನೂರು, ಹಾರ್ನಳ್ಳಿ ಶಾಖಾ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 17 ಹಾಗೂ 19 ರಂದು ಎರಡು ದಿನಗಳ ಬೆಳಿಗ್ಗೆ 9 ರಿಂದ ಸಂಜೆ 6.30ರವರೆಗೆ ಕುಂಸಿ, ಬಾಳೆಕೊಪ್ಪ, ಜೋರಡಿ, ತುಪ್ಪೂರು, ಕೋಣಿಹೂಸೂರು, ಹೊರಬೈಲು ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಇಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಪ್ರದೇಶದ ವ್ಯಾಪ್ತಿಗೊಳಪಡುವ ಗ್ರಾಹಕರು ಸಹಕರಿಸುವಂತೆ ಕುಂಸಿ ಮೆಸ್ಕಾಂ ಕಾರ್ಯ ಮತ್ತು ಪಾಲನಾ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
Also read: ಜನ್ನಾಪುರ ವಿನಾಯಕ ಮಹೋತ್ಸವ ಅನ್ನಸಂತರ್ಪಣಾ ಕಾರ್ಯಕ್ರಮ: ಶಾಸಕ ಸಂಗಮೇಶ್ವರ್ ಭಾಗಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post