ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ತಾಲ್ಲೂಕು, ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಕೆಳಕಂಡ ಗ್ರಾಮೀಣ ಪ್ರದೇಶಗಳಲ್ಲಿ ಮಾ.25 ರ ಬೆಳಿಗ್ಗೆ 9:00 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ವೀರಾಪುರ, ಈಚಲವಾಡಿ, ಹಾಯ್‍ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತೀನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















