ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2ರಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.21ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಸಾಗರ ರಸ್ತೆಯ ಆಯುರ್ವೇದ ಮಹಾವಿದ್ಯಾಲಯ, ನರ್ಸ್ ಕ್ವಾಟ್ರಸ್, ಎಸ್.ಬಿ.ಐ. ಬ್ಯಾಂಕ್, ಅಶೋಕ ಗ್ರ್ಯಾಂಡ್, ಆಯನೂರು ಗೇಟ್, ಶರಾವತಿ ನಗರ ಎ ಬ್ಲಾಕ್, ಪಟೇಲ್ ಸಾಮಿಲ್, ಸತ್ಯಂ ಫೋರ್ ವಿಂಗ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸೆ. 22 ರಂದು ವಿದ್ಯುತ್ ವ್ಯತ್ಯಯ:
ಎಂ.ಆರ್.ಎಸ್. 110 ಕೆವಿ/11 ಕೆ.ವಿ. ವಿವಿ ಕೇಂದ್ರದಲ್ಲಿ ತ್ರೈಮಾಸಿಕ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಸೆ. 22ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಡ್ಡಿನಕೊಪ್ಪ, ಪೋದಾರ್ಶಾಲೆ ರಸ್ತೆ, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post